ಧಾರವಾಡ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಯಾವುದೇ ಪ್ರಮುಖ ನೇಮಕಾತಿಗಳು ನಡೆದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ (R Ashok) ಆರೋಪ ಮಾಡಿದ್ದಾರೆ.
ಬಿಜೆಪಿಯಿಂದ ಪ್ರತಿಭಟನೆ
ಧಾರವಾಡದಲ್ಲಿಂದು ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ” ಎಂದು ದೂರಿದ್ದಾರೆ.
ಶ್ವೇತಪತ್ರ ಹೊರಡಿಸಲು ಆಗ್ರಹ
ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಹಾಗೂ ಖಾಲಿ ಇರುವ ಹುದ್ದೆಗಳ ವಿವರಗಳ ಕುರಿತು ಸರ್ಕಾರ ಕೂಡಲೇ ‘ಶ್ವೇತಪತ್ರ’ ಹೊರಡಿಸಬೇಕು ಎಂದು ಅವರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಮತ್ತಿತರ ಪ್ರಮುಖ ನಾಯಕರು ಉಪಸ್ಥಿತರಿದ್ದರು
ಇದನ್ನೂ ಓದಿ: ಏಪ್ರಿಲ್ ಅಂತ್ಯದೊಳಗೆ ಬೆಂಗಳೂರು ರಸ್ತೆ ಕಾಮಗಾರಿ ಪೂರ್ಣ: ಡಿಕೆ ಶಿವಕುಮಾರ್
