ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣಕ್ಕೆ (Actor Darshan) ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ನಡೆಯಬೇಕಿದ್ದ ಪ್ರಮುಖ ಸಾಕ್ಷಿಗಳ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಸಲ್ಲಿಸಿದ್ದ ಬೆನ್ನುನೋವಿನ ಚಿಕಿತ್ಸೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಹಾಗೂ ಈ ಪ್ರಕರಣದ ಪ್ರತ್ಯಕ್ಷದರ್ಶಿ (Eye Witness) ಪುನೀತ್ ಅವರ ಕ್ರಾಸ್ ಎಕ್ಸಾಮಿನೇಷನ್ (ಪಟಿಕಾಟದ ವಿಚಾರಣೆ) ಸಹ ನಾಳೆಗೆ ಮುಂದೂಡಲ್ಪಟ್ಟಿದೆ.
ರಾಜ್ಯಾದ್ಯಂತ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆ ಘಟನೆಗಳನ್ನು ಖಂಡಿಸಿ ವಕೀಲರ ಸಂಘ ಪ್ರತಿಭಟನೆಗೆ ಕರೆ ನೀಡಿದೆ. ವಕೀಲರು ಇಂದಿನ ಕೋರ್ಟ್ ಕಲಾಪಗಳಿಂದ ಸಂಪೂರ್ಣವಾಗಿ ಹೊರಗುಳಿದು ಧರಣಿ ನಡೆಸುತ್ತಿರುವ ಹಿನ್ನೆಲೆಯಲ್ಲಿ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶಿಸಿದೆ.
ನಟ ಧನ್ವೀರ್ ವಿರುದ್ಧ ವಿಜಯಲಕ್ಷ್ಮೀ (Actor Darshan) ಲೀಗಲ್ ವಾರ್: ಕೋರ್ಟ್ ಮೆಟ್ಟಿಲೇರಿದ ವಿವಾದ
ಇನ್ನೊಂದೆಡೆ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ‘ಬಜಾರ್’ ಚಿತ್ರದ ಖ್ಯಾತಿಯ ನಟ ಧನ್ವೀರ್ ನಡುವಿನ ಜಟಾಪಟಿ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ನಟ ದರ್ಶನ್ ಕುಟುಂಬದ ವಿರುದ್ಧ ಯಾವುದೇ ನಕಾರಾತ್ಮಕ ಹೇಳಿಕೆ ನೀಡದಂತೆ ಹಾಗೂ ದಾಸನ ಕುಟುಂಬದ ಗೌರವಕ್ಕೆ ಧಕ್ಕೆ ತರದಂತೆ ನಟ ಧನ್ವೀರ್ ವಿರುದ್ಧ ನ್ಯಾಯಾಲಯದಿಂದ ಈಗಾಗಲೇ ನಿರ್ಬಂಧಕಾಜ್ಞೆ (Injunction Order) ಜಾರಿಯಾಗಿದೆ.
ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ಅವರು ಧನ್ವೀರ್ ವಿರುದ್ಧ ಕಾನೂನು ಸಮರವನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಕ್ರಿಮಿನಲ್ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ.
ಕ್ರಿಮಿನಲ್ ಮಾನಹಾನಿ ದೂರು ಹಾಗೂ ಕಾನೂನು ಕ್ರಮದ ವಿವರ
ವಿಜಯಲಕ್ಷ್ಮೀ ಅವರ ಪರವಾಗಿ ವಕೀಲ ರಂಗನಾಥ ರೆಡ್ಡಿ ಅವರು 37ನೇ ಸಿವಿಲ್ ಮತ್ತು ಸೆಷನ್ಸ್ (CCH) ಕೋರ್ಟ್ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ನಟ ಧನ್ವೀರ್ ಮಾಧ್ಯಮಗಳಿಗೆ ನೀಡಿದ ಹೇಳಿಕೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಆಡಿಯೋ ತುಣುಕುಗಳಿಂದ ತಮ್ಮ ವೈಯಕ್ತಿಕ ಗೌರವಕ್ಕೆ ಮತ್ತು ವರ್ಚಸ್ಸಿಗೆ ತೀವ್ರ ಧಕ್ಕೆಯಾಗಿದೆ ಎಂದು ವಿಜಯಲಕ್ಷ್ಮೀ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ‘ರಾಮಾಯಣ’ ಚಿತ್ರಕ್ಕೆ ಬಾಂಬೆ ಹೈಕೋರ್ಟ್ ರಕ್ಷಣೆ: ಆನ್ಲೈನ್ ಪೈರಸಿಗೆ ಕಟ್ಟುನಿಟ್ಟಿನ ತಡೆ!
