ನವದೆಹಲಿ: 77ನೇ ಗಣರಾಜ್ಯೋತ್ಸವ (Republic Day) ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ದೇಶದ ವಿವಿಧ ಭಾಗಗಳ ವಿಜ್ಞಾನಿಗಳು, ಚಿಂತಕರು, ಸಂಶೋಧಕರಿಗೆ ಆಹ್ವಾನ ನೀಡಲಾಗುತ್ತಿದೆ.
ಇಸ್ರೋ ಅಧ್ಯಕ್ಷರಿಗೆ ಆಹ್ವಾನ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಡಾ. ವಿ. ನಾರಾಯಣನ್ ಅವರಿಗೆ ಅಂಚೆ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ರಾಷ್ಟ್ರಪತಿ ಭವನದಿಂದ ಬಂದಿರುವ ಆಹ್ವಾನ ಪತ್ರಿಕೆ ನೀಡಿದ್ದಾರೆ.
ಆಹ್ವಾನ ಸಂತಸ ತಂದಿದೆ ಎಂದ ನಾರಾಯಣನ್
ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಡಾ. ವಿ. ನಾರಾಯಣನ್ , ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಅಟ್ ಹೋಮ್ ಕಾರ್ಯಕ್ರಮಕ್ಕೆ ಅಹ್ವಾನ ಬಂದಿರುವುದು ಸಂತಸ ತಂದಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೆಮ್ಮೆಯಾಗುತ್ತಿದೆ. 1947ರ ನಂತರ ದೇಶಾದ್ಯಂತ ಅಂಚೆ ಇಲಾಖೆ ಉತ್ತಮ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದ ಅವರು, ಇದೇ ವೇಳೆ ದೇಶವಾಸಿಗಳಿಗೆ ಗಣರಾಜ್ಯೋತ್ಸವ ಶುಭಾಶಯ ತಿಳಿಸಿದರು.
