Sirsi: ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ: ವಿಶ್ವೇಶ್ವರ ಹೆಗಡೆ ಕಾಗೇರಿ

Sirsi Vishweshwar Hegde Kageri accuse congress government over corruption

ಶಿರಸಿ: ಭ್ರಷ್ಟಾಚಾರ ಮತ್ತು ದುರಾಡಳಿತದ ನಡುವೆ ರಾಜ್ಯ ಸರ್ಕಾರ (Karnataka Government) ಒಂದು ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆ ನಡೆಸುತ್ತಿರುವುದು ನಿರರ್ಥಕವಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಶಿರಸಿಯಲ್ಲಿಂದು (Sirsi) ಆರೋಪ ಮಾಡಿದ್ದಾರೆ.

ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು, ಹಿಂದೆ ಸೀಮಿತವಾಗಿದ್ದ ಭ್ರಷ್ಟಾಚಾರ ಇಂದು ಸಾರ್ವತ್ರಿಕವಾಗಿದೆ. ಪ್ರತಿಯೊಂದು ಇಲಾಖೆಯಲ್ಲೂ ದುರಾಡಳಿತ ಕಾಣಸಿಗುತ್ತಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ರಾಜ್ಯ ಸರ್ಕಾರ ಖಾತರಿ ಯೋಜನೆಗಳ ಹೆಸರಿನಲ್ಲಿ ಜನರವನ್ನು ದಿಕ್ಕು ತಪ್ಪಿಸುತ್ತಿದೆ ಎಂಂದು ಆರೋಪ ಮಾಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಜನರು ಪರಿತಪಿಸುವಂತಾಗಿದೆ

 ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆ ಬಾಧಿತವಾಗಿದೆ. ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಜನರು ಪರಿತಪಿಸುವಂತಾಗಿದೆ. ಪರಿಶಿಷ್ಟ ಸಮುದಾಯಗಳು ಹಾಗೂ ಹಿಂದುಳಿದ ವರ್ಗಗಳು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಅಲ್ಪಸಂಖ್ಯಾತ ಸಮುದಾಯಗಳ ಓಲೈಕೆಯಲ್ಲೇ ರಾಜ್ಯ ಸರ್ಕಾರ ದಿನ ಕಳೆಯುತ್ತಿದೆ ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ: ಬಿವೈ ವಿಜಯೇಂದ್ರ

Leave a Reply

Your email address will not be published. Required fields are marked *