ಬೆಂಗಳೂರು: ಈ ದೇಶದ ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವಂತೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದುಗೆ ಮಾತನಾಡಿದ ಅವರು ಸಂವಿಧಾನ ಪೀಠಿಕೆ ಓದು ಅಭಿಯಾನದ ಮೂಲಕ ಹೊಸ ಪೀಳಿಗೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಪ್ರತಿ ಹಂತದಲ್ಲೂ ಬದ್ದವಾಗಿದೆ ಎಂದು ಹೇಳಿದರು.
ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ
ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಬಿಜೆಪಿಯ ಮಾರ್ಗದರ್ಶನದಂತೆ ನಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪ ಮಾಡಿದ್ದಾರೆ. ರಾಜ್ಯಪಾಲರು ನಮ್ಮ ಸರ್ಕಾರದ ಪ್ರತಿನಿಧಿ ಅವರ ಭಾಷಣ ಎಂದರೆ ಅದು ಸರ್ಕಾರದ ಭಾಷಣವೇ ಹೊರತು ಅವರ ವೈಯಕ್ತಿಕ ಅಭಿಪ್ರಾಯ ಅಲ್ಲ. ಸರ್ಕಾರದ ಉದ್ದೇಶ ಮತ್ತು ಸಾಧನೆಗಳನ್ನು ಹೇಳುವುದು ಅವರ ಜವಾಬ್ದಾರಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಇದನ್ನೂ ಓದಿ: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ: ದಿನೇಶ್ ಗುಂಡೂರಾವ್
