T20 World Cup: ಭಾರತ vs ನಮೀಬಿಯಾ ಟೀ20 ಪಂದ್ಯ, ಆಟದಿಂದ ಅಭಿಷೇಕ್‌ ಶರ್ಮಾ ಔಟ್‌

T20 World Cup India vs Namibia match Updates

ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ರಾತ್ರಿ ನಡೆಯುತ್ತಿರುವ T20 ವಿಶ್ವಕಪ್ (T20 World Cup) 2026 ರ ಗ್ರೂಪ್ A ಪಂದ್ಯದಲ್ಲಿ ನಮೀಬಿಯಾ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಟಾಸ್ ಗೆದ್ದು ಭಾರತದ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಭಾರತ ತಂಡ ಹೀಗಿದೆ

ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್, ಇಶಾನ್ ಕಿಶನ್(ಪ), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್(ಸಿ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ

ನಮೀಬಿಯಾ ತಂಡ ಹೀಗಿದೆ

ನಮೀಬಿಯಾ (ಪ್ಲೇಯಿಂಗ್ XI): ಲೌರೆನ್ ಸ್ಟೀನ್‌ಕ್ಯಾಂಪ್, ಜಾನ್ ಫ್ರಿಲಿಂಕ್, ಜಾನ್ ನಿಕೋಲ್ ಲೋಫ್ಟಿ-ಈಟನ್, ಗೆರ್ಹಾರ್ಡ್ ಎರಾಸ್ಮಸ್(ಸಿ), ಜೆಜೆ ಸ್ಮಿಟ್, ಝೇನ್ ಗ್ರೀನ್(ಡಬ್ಲ್ಯು), ರೂಬೆನ್ ಟ್ರಂಪೆಲ್‌ಮನ್, ಮಲನ್ ಕ್ರುಗರ್, ಬರ್ನಾರ್ಡ್ ಸ್ಕೋಲ್ಟ್ಜ್, ಬೆನ್ ಶಿಕೊಂಗೊ, ಮ್ಯಾಕ್ಸ್ ಹೀಂಗೊ

ಇನ್ನುಅಭಿಷೇಕ್ ಶರ್ಮಾ ಹೊಟ್ಟೆಯ ಸೋಂಕಿನಿಂದ ಚೇತರಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತಿರುವುದರಿಂದ ಅವರು ಈ ಪಂದ್ಯವನ್ನು ಆಡುತ್ತಿಲ್ಲ. ಆಟಗಾರ ಫಿಟ್ ಆಗಲು ಇನ್ನೂ ಕೆಲ ಸಮಯ ಬೇಕಾಗುತ್ತದೆ ಎಂದು ಟಾಸ್ ಸಮಯದಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಮಾಹಿತಿ ನೀಡಿದರು.

ಇದನ್ನೂ ಓದಿ: ಹೊಟ್ಟೆಯ ಸೋಂಕಿನಿಂದ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

Leave a Reply

Your email address will not be published. Required fields are marked *