Abhishek Sharma: ಹೊಟ್ಟೆಯ ಸೋಂಕಿನಿಂದ ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು
ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಹೊಟ್ಟೆಯ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ನಮೀಬಿಯಾ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹದಗೆಟ್ಟ ಆರೋಗ್ಯ ಪರಿಸ್ಥಿತಿ ಮಾಹಿತಿಗಳ ಪ್ರಕಾರ, ಅಮೆರಿಕ ವಿರುದ್ಧದ ಹಿಂದಿನ ಪಂದ್ಯಕ್ಕೂ ಮುನ್ನ ಅವರು ಅಸ್ವಸ್ಥರಾಗಿದ್ದರು ಮತ್ತು ಪಂದ್ಯ ಆಡಿದ ನಂತರ ಅವರ ಸ್ಥಿತಿ ಹದಗೆಟ್ಟಿತು ಎನ್ನಲಾಗಿದೆ. ಮೂಲಗಳ ಪ್ರಕಾರ, ಅಭಿಷೇಕ್‌ಗೆ ಜ್ವರ ಹೆಚ್ಚಾಗಿತ್ತು ಮತ್ತು ತಕ್ಷಣ ಅವರಿಗೆ ಡ್ರಿಪ್ಸ್ ನೀಡಲಾಗಿದೆ. ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ…
