Actor Ravichandran: ಶಾಂತಿ ಕ್ರಾಂತಿ’ ರೀ-ರಿಲೀಸ್‌ಗೆ ಅಭಿಮಾನಿಗಳ ಭಾರಿ ಡಿಮ್ಯಾಂಡ್: ಸಮಸ್ಯೆ ತೆರೆದಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್!
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಹಳೆಯ ಕ್ಲಾಸಿಕ್ ಸಿನಿಮಾಗಳು ಮರು ಬಿಡುಗಡೆಯಾಗಿ ಪ್ರೇಕ್ಷಕರಿಂದ ಅಭೂತಪೂರ್ವ ಬೆಂಬಲ ಪಡೆಯುತ್ತಿವೆ. ಇದೇ ಹಾದಿಯಲ್ಲಿ ಕನಸುಗಾರ ರವಿಚಂದ್ರನ್ ನಿರ್ದೇಶಿಸಿ, ಅಭಿನಯಿಸಿದ್ದ ಭಾರತದ ಮೊದಲ ‘ಪ್ಯಾನ್ ಇಂಡಿಯಾ’ ಹೆಗ್ಗಳಿಕೆಯ ‘ಶಾಂತಿ ಕ್ರಾಂತಿ’ ಸಿನಿಮಾವನ್ನು ಮತ್ತೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಬೇಕು ಎನ್ನುವ ಬೇಡಿಕೆ ಅಭಿಮಾನಿಗಳಿಂದ ತೀವ್ರವಾಗಿ ಕೇಳಿಬರುತ್ತಿದೆ. ಅಂದು ಬಾಕ್ಸ್ ಆಫೀಸ್‌ನಲ್ಲಿ ಸೋತಿದ್ದ ಈ ಸಾಹಸಮಯ ಸಿನಿಮಾವನ್ನು ಇಂದು ಪ್ರೇಕ್ಷಕರು ಕೊಂಡಾಡುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಮರು ಬಿಡುಗಡೆಗಾಗಿ ದೊಡ್ಡ ಅಭಿಯಾನವೇ ನಡೆಯುತ್ತಿದೆ. ಆದರೆ, ಈ…
