AIDSO: ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ AIDSO ವಿದ್ಯಾರ್ಥಿಗಳು: ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ
ಮೈಸೂರು: ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆಯ (AIDSO) ನೇತೃತ್ವದಲ್ಲಿ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿದ್ಯಾರ್ಥಿಗಳು, ಸಾಹಿತಿಗಳು, ನಿವೃತ್ತ ಪ್ರಾಧ್ಯಾಪಕರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಫ್ರೀಡಂ ಪಾರ್ಕ್ ಧರಣಿಗೆ ವಿದ್ಯಾರ್ಥಿ ಸಂಘಟನೆಯ ಬೆಂಬಲ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ AIDSO ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಅವರು, ಕಳೆದ 12 ದಿನಗಳಿಂದ ಮಳೆ,…
