TOP NEWS
Severe Air Pollution Grips North India Delhi and Haryana Cities Record Very Poor AQI Levels

Air Pollution: ದೇಶದ ಅತ್ಯಂತ ಕಲುಷಿತ ನಗರಗಳ ಪಟ್ಟಿ ಬಿಡುಗಡೆ: ಪಾಣಿಪತ್ ಹಾಗೂ ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ!

ನವದೆಹಲಿ: ಚಳಿಗಾಲದ ಆರಂಭದೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿ (Air Pollution) ಸೇರಿದಂತೆ ಉತ್ತರ ಭಾರತದ ಹಲವು ಪ್ರಮುಖ ನಗರಗಳಲ್ಲಿ ವಾಯುಮಾಲಿನ್ಯವು ತೀವ್ರ ಸ್ವರೂಪ ಪಡೆದುಕೊಂಡಿದೆ. ಹರಿಯಾಣ, ಉತ್ತರ ಪ್ರದೇಶ ಮತ್ತು ಪಂಜಾಬ್‌ನ ವಿವಿಧ ನಗರಗಳಲ್ಲಿ ಗಾಳಿಯ ಗುಣಮಟ್ಟವು (AQI) ಅತ್ಯಂತ ಕಳಪೆ ಮಟ್ಟಕ್ಕೆ ಕುಸಿದಿದ್ದು, ಜನಸಾಮಾನ್ಯರು ಉಸಿರಾಟದ ಸಮಸ್ಯೆಯಿಂದ ಪರದಾಡುವಂತಾಗಿದೆ. ನವೆಂಬರ್ 5 ರಂದು ಬಿಡುಗಡೆಯಾದ ಅಧಿಕೃತ ವಾಯು ಗುಣಮಟ್ಟ ಸೂಚ್ಯಂಕದ ಅಂಕಿಅಂಶಗಳ ಪ್ರಕಾರ, ದೇಶದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಹರಿಯಾಣದ ನಗರಗಳೇ ಮುಂಚೂಣಿಯಲ್ಲಿರುವುದು ಆತಂಕಕಾರಿ…

Read Full News
Karnataka Issues Diwali Crackers Rules Only 2 Hour Window Permitted from 8 PM to 10 PM

Deepavali: ದೀಪಾವಳಿಗೆ ಪರಿಸರ ಇಲಾಖೆ ಕಟ್ಟುನಿಟ್ಟಿನ ರೂಲ್ಸ್: ರಾತ್ರಿ 8 ರಿಂದ 10 ಗಂಟೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ!

ಬೆಂಗಳೂರು: ಸಾಲು ಸಾಲು ಹಬ್ಬಗಳ ಸಂಭ್ರಮದಲ್ಲಿರುವ ರಾಜ್ಯದ ಜನತೆಗೆ ಪರಿಸರ ಇಲಾಖೆಯು ಪ್ರಮುಖ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ. ದೀಪಾವಳಿ ಹಬ್ಬದ (Deepavali) ಸಂದರ್ಭದಲ್ಲಿ ಉಂಟಾಗುವ ತೀವ್ರ ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯವನ್ನು ಪರಿಣಾಮಕಾರಿಯಾಗಿ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದೆ. ಈ ಬಾರಿ ಹಬ್ಬದ ದಿನಗಳಲ್ಲಿ ರಾತ್ರಿ 8:00 ರಿಂದ 10:00 ಗಂಟೆಯವರೆಗೆ ಅಂದರೆ ಕೇವಲ 2 ಗಂಟೆಗಳ ಕಾಲ ಮಾತ್ರ ಪಟಾಕಿ ಹೊಡೆಯಲು ಕಾಲಾವಕಾಶ ನೀಡಲಾಗಿದೆ ಎಂದು ಪರಿಸರ ಸಚಿವ ರಾಮಲಿಂಗಾರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ…

Read Full News
delhi government planning to avoid air pollution new trick

Air Pollution: ದೆಹಲಿಯಲ್ಲಿ ಚಳಿಗಾಲದ ಮಾಲಿನ್ಯಕ್ಕೆ ಮುಂಚಿತವಾಗಿಯೇ ಮಾಸ್ಟರ್ ಪ್ಲಾನ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪ್ರತಿವರ್ಷ ಚಳಿಗಾಲದಲ್ಲಿ ಸೃಷ್ಟಿಯಾಗುವ ಭೀಕರ ವಾಯುಮಾಲಿನ್ಯದ (Air Pollution) ಬಿಕ್ಕಟ್ಟನ್ನು ಮೊದಲೇ ನಿಯಂತ್ರಿಸಲು ದೆಹಲಿ ಸರ್ಕಾರವು ಭರ್ಜರಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದೆ. ಮುಂಬರುವ ದಿನಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಅಪಾಯಕಾರಿ ಮಟ್ಟಕ್ಕೆ ತಲುಪದಂತೆ ತಡೆಯಲು ಈ ಕಠಿಣ ನಿಯಮಾವಳಿಗಳನ್ನು ರೂಪಿಸಲಾಗಿದ್ದು, ಇವು ನವೆಂಬರ್ 1 ರಿಂದ ಫೆಬ್ರವರಿ 28 ರವರೆಗೆ ಕಡ್ಡಾಯವಾಗಿ ಜಾರಿಯಲ್ಲಿರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. PUC ಇಲ್ಲದೇ ಇಂಧನ ಇಲ್ಲ ಈ ನೂತನ ನಿಯಮಗಳಿಂದಾಗಿ ವಾಹನ ಸವಾರರು ಜಾಗರೂಕರಾಗಿರಬೇಕಾಗುತ್ತದೆ….

Read Full News