Upendra Dwivedi: ಆಪರೇಷನ್ ಸಿಂಧೂರ್ ಮುಂದುವರೆದಿದೆ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಭಾರತೀಯ ಸೇನಾ ದಿನದ ಕಾರ್ಯಕ್ರಮದಲ್ಲಿ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರು ಪಾಲ್ಗೊಂಡು, ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಆಪರೇಷನ್ ಸಿಂಧೂರ್ ಮುಂದುವರೆದಿದೆ ಕಾರ್ಯಕ್ರಮದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಮುಂದುವರಿದಿದ್ದು, ಭವಿಷ್ಯದಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ದುಸ್ಸಾಹಸಗಳಿಗೆ ದೃಢವಾಗಿ ಪ್ರತಿಕ್ರಿಯೆ ನೀಡಲಾಗುವುದು. ಆಪರೇಷನ್ ಸಿಂಧೂರ್ ಮೂರೂ ಸೇನಾಪಡೆಗಳ ಸಮನ್ವಯ, ಸ್ಪಷ್ಟವಾದ ರಾಜಕೀಯ ನಿರ್ದೇಶನ ಮತ್ತು ಸೇನೆಗೆ ದೊರೆತ ಸಂಪೂರ್ಣ ಸ್ವಾತಂತ್ರ್ಯಕ್ಕೆ…
