Asaduddin Owaisi: ಭೋಜಶಾಲಾ ಮಂದಿರ ಎಂದು ಘೋಷಿಸಿದ ಹೈಕೋರ್ಟ್; ತೀರ್ಪಿನ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಓವೈಸಿ ಸಜ್ಜು
ಇಂದೋರ್: ಮಧ್ಯಪ್ರದೇಶದ ಧಾರ ಜಿಲ್ಲೆಯಲ್ಲಿರುವ ವಿವಾದಿತ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಮೂಲತಃ ಸರಸ್ವತಿ ದೇವಿಯ ಮಂದಿರವಾಗಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಶುಕ್ರವಾರ ಐತಿಹಾಸಿಕ ತೀರ್ಪು ನೀಡಿದೆ. ಈ ಸಂಕೀರ್ಣವು ಪರಮಾರ ರಾಜವಂಶದ ರಾಜ ಭೋಜ ನಿರ್ಮಿಸಿದ ಸಂಸ್ಕೃತ ಕಲಿಕಾ ಕೇಂದ್ರ ಮತ್ತು ವಾಗ್ದೇವಿ ಮಂದಿರವಾಗಿದೆ ಎಂಬ ಹಿಂದೂ ಪರ ಅರ್ಜಿದಾರರ ವಾದವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಆದರೆ, ಈ ತೀರ್ಪನ್ನು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಓವೈಸಿ (Asaduddin Owaisi) ತೀವ್ರವಾಗಿ ಟೀಕಿಸಿದ್ದು, ಸುಪ್ರೀಂ ಕೋರ್ಟ್…
