Karaga: ಬೆಂಗಳೂರು ಕರಗಾಗೆ ದಿನಗಣನೆ, ಆಯುಕ್ತರಿಂದ ಸ್ಥಳ ಪರಿಶೀಲನೆ
ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ (Karaga) ಮಹೋತ್ಸವದ ಅಂಗವಾಗಿ ಧರ್ಮರಾಯಸ್ವಾಮಿ ದೇವಸ್ಥಾನದ ಪೂರ್ವಸಿದ್ಧತೆಗಳ ಬಗ್ಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ನೇತೃತ್ವದಲ್ಲಿಂದು ದೇವಸ್ಥಾನದ ಸುತ್ತಲಿನ ಸ್ಥಳ ಪರಿಶೀಲನೆ ನಡೆಯಿತು. ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಆಯುಕ್ತರು ದೇವಸ್ಥಾನ ಆಡಳಿತ ಮಂಡಳಿಯವರೊಂದಿಗೆ ಹಾಗೂ ಸಂಬಂಧಪಟ್ಟ ನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವತಿಯಿಂದ ಕೈಗೊಳ್ಳಬೇಕಾದ, ಕರಗ ಹಾದುಹೋಗುವ ಸ್ಥಳಗಳಲ್ಲಿ ರಸ್ತೆ ದುರಸ್ತಿ, ಒಳಚರಂಡಿಗಳ ಮ್ಯಾನ್‌ಹೋಲ್‌ಗಳ ದುರಸ್ತಿ, ರಸ್ತೆ ಗುಂಡಿ…
