CM Siddaramaiah: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ, ಇಂಜಿನಿಯರ್ ಅಮಾನತಿಗೆ ಸೂಚನೆ
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು. ಜಿಬಿಎ ಅಧಿಕಾರಿಗಳ ಸಭೆ ಮಾಡಿದ ಸಿಎಂ ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ಜಿಬಿಎ ಆಯುಕ್ತರುಗಳ ಸಭೆ ಜರುಗಿತು. ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ…
