MLA Munirathna: ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ಯಶವಂತಪುರ ಠಾಣೆಯಲ್ಲಿ ಹೊಸ ಎಫ್‌ಐಆರ್
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ(MLA Munirathna) ಅವರಿಗೆ ಕಾನೂನು ಸಂಕಷ್ಟಗಳು ಬೆನ್ನಟ್ಟುತ್ತಲೇ ಇದ್ದು, ಇದೀಗ ಅವರ ವಿರುದ್ಧ ಮತ್ತೊಂದು ಹೊಸ ಎಫ್‌ಐಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕ ವೇದಿಕೆಯಲ್ಲಿ ಬಹಿರಂಗಪಡಿಸಿದ ಗಂಭೀರ ಆರೋಪದಡಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ಶಾಸಕರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದ ಸಂತ್ರಸ್ತೆಯೇ ಈಗ ಮತ್ತೊಮ್ಮೆ ಪೊಲೀಸರ ಮೊರೆ ಹೋಗಿದ್ದಾರೆ. ಬಿಜೆಪಿ ಕಚೇರಿ ಉದ್ಘಾಟನೆಯ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ…
