Congress: ದೆಹಲಿಯಲ್ಲಿ ಹೆಚ್ಚಿದ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡು: ಮಂತ್ರಿಗಿರಿ ಮತ್ತು ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಬಿ.ಕೆ. ಹರಿಪ್ರಸಾದ್ ಭಾರಿ ಕಸರತ್ತು!
ನವದೆಹಲಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಸುಖಾಂತ್ಯ ಕಾಣುತ್ತಿದ್ದಂತೆಯೇ, ಇತ್ತ ದೇಶದ ರಾಜಧಾನಿ ನವದೆಹಲಿಯಲ್ಲಿ ನೂತನ ಸಚಿವ ಸಂಪುಟ (Congress) ಸೇರ್ಪಡೆಗಾಗಿ ಭಾರಿ ಪೈಪೋಟಿ ಶುರುವಾಗಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ದೆಹಲಿ ತಲುಪಿದ್ದು, ಹೊಸ ಕ್ಯಾಬಿನೆಟ್‌ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ರಾಜಧಾನಿಯಲ್ಲಿ ಬೀಡುಬಿಟ್ಟು ಬಿರುಸಿನ ಸರ್ಕಸ್ ಆರಂಭಿಸಿದ್ದಾರೆ. ಲಾಭಿ ಆರಂಭಿಸಿದ ಬಿಕೆ ಹರಿಪ್ರಸಾದ್ ಈ ಸಚಿವ ಸಂಪುಟ ರಚನೆಯ ಕಸರತ್ತಿನ ನಡುವೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್…
