Puttaranga Shetty: ರಕ್ತದಾನ ಮನುಷ್ಯನಿಗೆ ಮರುಜೀವ ನೀಡಿದಂತೆ; ಯುವಕರು ರಕ್ತದಾನಕ್ಕೆ ಮುಂದಾಗಲಿ: ಸಿ. ಪುಟ್ಟರಂಗಶೆಟ್ಟಿ ಕರೆ
ಚಾಮರಾಜನಗರ: ನಾವು ನೀಡುವ ಒಂದು ಹನಿ ರಕ್ತವೂ ತುರ್ತು ಪರಿಸ್ಥಿತಿಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ವ್ಯಕ್ತಿಗೆ ಮರುಜೀವ ನೀಡಿದಂತಾಗುತ್ತದೆ. ಆದ್ದರಿಂದ ಇಂದಿನ ಯುವಜನತೆ ಯಾವುದೇ ಭಯವಿಲ್ಲದೆ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರಬೇಕು ಎಂದು ಶಾಸಕ ಹಾಗೂ ಮಾಜಿ ಸಚಿವ ಸಿ. ಪುಟ್ಟರಂಗಶೆಟ್ಟಿ (Puttaranga Shetty) ಕರೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲಾಡಳಿತ ಭವನದ ಸಂಕೀರ್ಣದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು…
