BMTC: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನ ಸ್ಟೇರಿಂಗ್ ವೀಲ್ ಕಟ್: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆಯ (BMTC) ನಿರ್ವಹಣಾ ಲೋಪಗಳು ಮತ್ತು ಅಧಿಕಾರಿಗಳ ಬೇಜವಾಬ್ದಾರಿಗೆ ಮತ್ತೊಂದು ಜೀವಂತ ನಿದರ್ಶನವೆಂಬಂತೆ ರಸ್ತೆಯಲ್ಲಿ ಸಾಗುತ್ತಿದ್ದ ಚಾಲೂ ಬಸ್‌ನ ಸ್ಟೇರಿಂಗ್ ವೀಲ್ ಏಕಾಏಕಿ ಕಳಚಿ ಚಾಲಕನ ಕೈಗೆ ಬಂದಿರುವ ಆತಂಕಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನೂರಾರು ಪ್ರಯಾಣಿಕರನ್ನು ಹೊತ್ತು ವೇಗವಾಗಿ ಸಾಗುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಈ ರೀತಿಯ ತಾಂತ್ರಿಕ ದೋಷ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ತೀವ್ರ ಭೀತಿಯನ್ನುಂಟು ಮಾಡಿದೆ. ಏನಿದು ಘಟನೆ? ಪ್ರಯಾಣಿಕರಿಂದ ತುಂಬಿದ್ದ ಬಸ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಸ್ಟೇರಿಂಗ್…
