Bomb Blast: ಪಾಕಿಸ್ತಾನದಲ್ಲಿ ಬಾಂಬ್ ಸ್ಫೋಟ, 9 ಜನ ಸಾವು
ಪಾಕಿಸ್ತಾನ: ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ಮಂಗಳವಾರ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಲ್ಲಿ(Bomb Blast) ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದು, ಸುಮಾರು 30ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಕ್ಕಿ ಮರ್ವತ್ ಜಿಲ್ಲೆಯ ನೌರಂಗ್ ಬಜಾರ್‌ನಲ್ಲಿ ಜನದಟ್ಟಣೆ ಹೆಚ್ಚಿದ್ದ ಸಮಯದಲ್ಲಿ ಈ ದುರಂತ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳು ಜಖಂಗೊಂಡಿವೆ. ಘಟನೆಯಿಂದ ಮಾರುಕಟ್ಟೆಯಲ್ಲಿ ಭೀತಿ ಸೃಷ್ಟಿಯಾಗಿದ್ದು, ಗಾಯಾಳುಗಳನ್ನು ರಕ್ಷಿಸಲು ಜನರು ಹರಸಾಹಸ ಪಡುತ್ತಿರುವ ದೃಶ್ಯಗಳು ಕಂಡುಬಂದಿವೆ ಎಂದು ರಕ್ಷಣಾ ಸಂಸ್ಥೆ ತಿಳಿಸಿದೆ. ಅಫ್ಘಾನಿಸ್ತಾನ ಉಗ್ರರಿಂದ ಕೃತ್ಯ…
