BS Yediyurappa: 2028ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಖಚಿತ: ಕಲಬುರಗಿಯಲ್ಲಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ
ಕಲಬುರಗಿ: ರಾಜ್ಯದಲ್ಲಿ ಮುಂಬರುವ ಎಲ್ಲ ಹಂತದ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಜಾತ್ಯತೀತ ಜನತಾದಳ (ಜೆಡಿಎಸ್) ಮೈತ್ರಿಕೂಟವು ಸಂಪೂರ್ಣ ಒಗ್ಗಟ್ಟಿನಿಂದ ಸ್ಪರ್ಧಿಸಲಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ಪ್ರಬಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಅವರು ನಾಮಪತ್ರ ಸಲ್ಲಿಕೆ…
