Congress: ಬಾಗಲಕೋಟೆ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿಸಿ: ಬಿಜೆಪಿ ಬೆಂಬಲಿಸಿದ ಮೂವರು ಪ್ರಭಾವಿ ನಾಯಕರ ಅಮಾನತು
ಬಾಗಲಕೋಟೆ: ದಾವಣಗೆರೆಯ ಬೆನ್ನಲ್ಲೇ ಇದೀಗ ಬಾಗಲಕೋಟೆಯಲ್ಲೂ ಪಕ್ಷವಿರೋಧಿ ಚಟುವಟಿಕೆಗಳ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ (Congress) ಕಠಿಣ ಕ್ರಮ ಕೈಗೊಂಡಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಉಮೇಶ್ ಮೇಟಿ ಅವರ ವಿರುದ್ಧ ಕೆಲಸ ಮಾಡಿ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ನೀಡಿದ ಆರೋಪದ ಮೇಲೆ ಮೂವರು ಪ್ರಮುಖ ನಾಯಕರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರು ಯಾರು? ಬಿಡಿಸಿಸಿ (BDCC) ಬ್ಯಾಂಕ್‌ನ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಹಾಗೂ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್…
