BY Vijayendra: ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ, ಸೂಕ್ತ ತನಿಖೆಗೆ ಬಿವೈ ವಿಜಯೇಂದ್ರ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಕೇಂದ್ರ ತನಿಖಾ ದಳ ಅಥವಾ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿ ಅವರಿಂದ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಒತ್ತಾಯಿಸಿದ್ದಾರೆ. ಸೂಕ್ತವಾದ ತನಿಖೆ ಮಾಡಬೇಕು ಸುದ್ದಿಗಾರರೊಂದಿಗೆ ಅವರು, ಅಬಕಾರಿ ಇಲಾಖೆಯಲ್ಲಿ ಆರು ಸಾವಿರ ಕೋಟಿ ರೂಪಾಯಿಗಳ ಹಗರಣ ನಡೆದಿದೆ. ಈ ಹಗರಣದಲ್ಲಿ ಸಚಿವ ಆರ್ ಬಿ. ತಿಮ್ಮಾಪುರ ಮತ್ತು ಅವರ ಕುಟುಂಬಸ್ಥರು ಭಾಗಿಯಾಗಿರುವ ಆರೋಪವಿದೆ. ಆದ್ದರಿಂದ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. …
