Cauvery Crisis: ಕಾವೇರಿ ಕೊಳ್ಳದ ಜನತೆಗೆ ಮತ್ತೆ ಶಾಕ್: ತಮಿಳುನಾಡಿಗೆ ದಿನಕ್ಕೆ 3,000 ಕ್ಯೂಸೆಕ್ ನೀರು ಹರಿಸಲು CWRC ನಿರ್ದೇಶನ!
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ಕರ್ನಾಟಕದ ಮುಕ್ಕಾಲು ಭಾಗವನ್ನು ಈಗಾಗಲೇ ಸರ್ಕಾರ ಅಧಿಕೃತವಾಗಿ ಬರಪೀಡಿತ ಪ್ರದೇಶವೆಂದು (Cauvery Crisis) ಘೋಷಿಸಿದೆ. ಬೆಳೆ ನಷ್ಟ ಮತ್ತು ಕುಡಿಯುವ ನೀರಿನ ಅಭಾವದ ಕುರಿತು ಕೇಂದ್ರದ ಅಧ್ಯಯನ ತಂಡಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರ್ವೆ ಕಾರ್ಯ ನಡೆಸುತ್ತಿರುವ ಬೆನ್ನಲ್ಲೇ, ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ (ಸಿಡಬ್ಲ್ಯೂಆರ್‌ಸಿ) ಕರ್ನಾಟಕಕ್ಕೆ ಮತ್ತೊಂದು ಭಾರಿ ಆಘಾತ ನೀಡಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ಕಾವೇರಿ ನೀರನ್ನು…
