CRIME: ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸಿಸಿಬಿ ಬಲೆಗೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೌಡಿ ಮುಕ್ತ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ಸಂಘಟಿತ ಅಪರಾಧ ದಳದ ಅಧಿಕಾರಿಗಳು, ಸುದೀರ್ಘ ಕಾಲದಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಇಬ್ಬರು ಕುಖ್ಯಾತ ಅಪರಾಧಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕೋರ್ಟ್‌ಗೆ ಹಾಜರಾಗದೆ ಪರಾರಿಯಾಗಿದ್ದ ರೌಡಿಶೀಟರ್ ಒಬ್ಬನನ್ನು ಸಿಸಿಬಿ (Crime) ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ. ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ…
