Census: ಜಾತಿಗಣತಿ ವಿಳಂಬ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ
ನವದೆಹಲಿ: ದೇಶದಲ್ಲಿ ಜಾತಿಗಣತಿ ನಡೆಸುವ ಪ್ರಕ್ರಿಯೆಯನ್ನು (Census) ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಆರೋಪಿಸಿದೆ. ಜಾತಿಗಣತಿ ನಡೆಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರೈಸಿದ್ದರೂ, ಈವರೆಗೂ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಕಾಂಗ್ರೆಸ್ ಹೇಳಿದ್ದೇನು? ಈ ಕುರಿತು ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, “ಕಳೆದ ವರ್ಷ ಏಪ್ರಿಲ್ 30ರಂದು ಪ್ರಧಾನಿಯವರು ಮುಂದಿನ ಜನಗಣತಿಯಲ್ಲಿ…
