Supreme Court: ನಲ್ಸಾರ್ ವಿದ್ಯಾರ್ಥಿಗಳ ವಿರುದ್ಧದ ಬಿಸಿಐ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ: “ಇದು ನನ್ನ ಮತ್ತು ವಿದ್ಯಾರ್ಥಿಗಳ ನಡುವಿನ ವಿಚಾರ” ಎಂದ ಸಿಜೆಐ
ನವದೆಹಲಿ: ಹೈದರಾಬಾದ್‌ನ ಪ್ರಸಿದ್ಧ ‘ನಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ 2026ರ ಸಾಲಿನ ಪದವೀಧರರ ನೋಂದಣಿಯನ್ನು ತಡೆಹಿಡಿದಿದ್ದ ಭಾರತೀಯ ವಕೀಲರ ಪರಿಷತ್ (ಬಿಸಿಐ) ನಡೆಯ ವಿರುದ್ಧ ಸುಪ್ರೀಂ ಕೋರ್ಟ್ (Supreme Court) ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ವಿಷಯದಲ್ಲಿ ಬಿಸಿಐ ಮಧ್ಯಪ್ರವೇಶಿಸುವ ಅಗತ್ಯವೇ ಇರಲಿಲ್ಲ ಎಂದಿರುವ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮಿಶ್ರಾ, ವಿದ್ಯಾರ್ಥಿಗಳು ಅಥವಾ ಅಧ್ಯಾಪಕರ ವಿರುದ್ಧ ಯಾವುದೇ ಶಿಕ್ಷಾರ್ಹ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಪೀಠಾಸೀನ ಮುಖ್ಯ ನ್ಯಾಯಮೂರ್ತಿಗಳು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಆಗಮಿಸುವುದನ್ನು…
