CJP Protest: ವದಂತಿಗಳಿಗೆ ಕಿವಿಗೊಡಬೇಡಿ, ಶಾಂತಿ ಕಾಪಾಡಿ: ಸಾರ್ವಜನಿಕರಿಗೆ ದೆಹಲಿ ಖಾಕಿ ಪಡೆಯ ಕಟ್ಟುನಿಟ್ಟಿನ ಸೂಚನೆ
ನವದೆಹಲಿ: ದೇಶದ ರಾಜಧಾನಿ ನವದೆಹಲಿಯಲ್ಲಿ ಅಕ್ಟೋಬರ್ 10 ರಂದು ಸಿಜೆಪಿ, ಎಡಪಂಥೀಯ ಸಂಘಟನೆಗಳು ಹಾಗೂ ಆಮ್ ಆದ್ಮಿ ಪಾರ್ಟಿಯ ವಿದ್ಯಾರ್ಥಿ ವಿಭಾಗಗಳು ಬೃಹತ್ ಪ್ರತಿಭಟನೆಗೆ (CJP Protest) ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಯಾವುದೇ ರೀತಿಯ ಕಾನೂನು ಮತ್ತು ಸುವ್ಯವಸ್ಥೆ ಹದಗೆಡದಂತೆ ತಡೆಯಲು ಯುವಕರು, ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಿವಾಸಿಗಳನ್ನು ತಲುಪಿ ಜಾಗೃತಿ ಮೂಡಿಸುವ ವಿಶೇಷ ಕಾರ್ಯಾಚರಣೆಯನ್ನು ಪೊಲೀಸರು ಆರಂಭಿಸಿದ್ದಾರೆ. ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ…
