TOP NEWS
d sudhkar health crucial dcm and cm visits

D Sudhakar: ಸಚಿವ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ-ಡಿಸಿಎಂ

ಬೆಂಗಳೂರು: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ (D Sudhakar) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಭಾನುವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ (KIMS) ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಅವರು ವೈದ್ಯರ ತಂಡ ಮತ್ತು ಸಚಿವರ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದಾರೆ. ಹೆಚ್ಚಾಗಿರುವ ಸೋಂಕು ಸಚಿವ ಡಿ. ಸುಧಾಕರ್ ಅವರಿಗೆ ಇತ್ತೀಚೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆ…

Read More
CM Siddaramaiah and Narendra modi special photo viral

CM Siddaramaiah: ಮೋದಿ ಜೊತೆ ಸಿದ್ದರಾಮಯ್ಯ ಸೀಕ್ರೇಟ್‌ ಟಾಕ್‌, ಫೋಟೋ ವೈರಲ್

ಮಂಡ್ಯ: ರಾಜ್ಯ ರಾಜಕಾರಣದ ಇಬ್ಬರು ಧ್ರುವಗಳಂತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆಪ್ತ ಸಮಾಲೋಚನೆಯ ಫೋಟೋವೊಂದು ಈಗ ಎಲ್ಲೆಡೆ ಸದ್ದು ಮಾಡುತ್ತಿದೆ. ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ‘ಶ್ರೀಗುರು ಭೈರವೈಕ್ಯ ಮಂದಿರ’ ಲೋಕಾರ್ಪಣೆ ಕಾರ್ಯಕ್ರಮದ ವೇಳೆ ಈ ಅಪರೂಪದ ದೃಶ್ಯ ಕಂಡುಬಂದಿದೆ. ಕುತೂಹಲ ಮೂಡಿಸಿದ ಮೋದಿ ಮಾತು: ಕಾರ್ಯಕ್ರಮಕ್ಕಾಗಿ ಆಗಮಿಸಿದ ಪ್ರಧಾನಿ ಮೋದಿಯವರನ್ನು ಬರಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಪ್ರಧಾನಿಗಳು ಸಿಎಂ…

Read More
CM Siddaramaiah clarification regarding yuvanidhi

CM Siddaramaiah: ಯುವನಿಧಿ ಮಾಶಾಸನ ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ‘ಯುವನಿಧಿ’ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ನಿರುದ್ಯೋಗಿ ಪದವೀಧರರಿಗೆ ನೀಡಲಾಗುತ್ತಿರುವ ಮಾಶಾಸನವನ್ನು ಸರ್ಕಾರವು ಸ್ಥಗಿತಗೊಳಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಂತಿನ ರೂಪದಲ್ಲಿ ಹಣ  2026-27ನೇ ಸಾಲಿನ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಯೋಜನೆಯಡಿ ನೋಂದಾಯಿತರಾಗಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಕಂತಿನ ರೂಪದಲ್ಲಿ ಹಣವನ್ನು ನಿಯಮಿತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿಯೂ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ 600 ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಮೀಸಲಿಡಲಾಗಿದ್ದು, ಮಾಸಿಕವಾಗಿ ನೀಡುವ…

Read More
CM Siddaramaiah letter to central government regarding LPG issue

CM Siddaramaiah: ರಾಜ್ಯದಲ್ಲಿ LPG ಸಮಸ್ಯೆ, ಕೇಂದ್ರಕ್ಕೆ ಪತ್ರ ಬರೆದ ಸಿಎಂ

ಬೆಂಗಳೂರು: ರಾಜ್ಯಕ್ಕೆ ಸೂಕ್ತ ರೀತಿಯಲ್ಲಿ ವಾಣಿಜ್ಯ ಹಾಗೂ ಆಟೋ ಎಲ್‌ಪಿಜಿ ಹಂಚಿಕೆಗೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸುವಂತೆ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ಹರ್‌ದೀಪ್ ಸಿಂಗ್ ಪುರಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪತ್ರ ಬರೆದಿದ್ದಾರೆ. ಗೃಹ ಬಳಕೆಗೆ ಆದ್ಯತೆ ನೀಡಿರುವ ರಾಜ್ಯ ಸಚಿವಾಲಯದ ನಿರ್ದೇಶನದಂತೆ ಗೃಹ ಬಳಕೆ ಗ್ರಾಹಕರಿಗೆ ಎಲ್ ಪಿಜಿ ಪೂರೈಕೆಗೆ ಆದ್ಯತೆ ನೀಡಿರುವುದರಿಂದ ವಾಣಿಜ್ಯ ಎಲ್‌ಪಿಜಿ ಸಿಗದಂತಾಗಿದೆ. ರೆಸ್ಟೋರೆಂಟ್, ಹೋಟೆಲ್, ಪಿಜಿ ಮತ್ತಿತರರಿಂದ 50 ಸಾವಿರ ಎಲ್ ಪಿಜಿ…

Read More
CM Siddaramaiah talks about his political journey

CM Siddaramaiah: ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜಕೀಯವಾಗಿ ಸೋಲು ಮತ್ತು ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. 1978ರಿಂದ ರಾಜಕೀಯ ಆರಂಭ ಮೈಸೂರು ಸಮೀಪದ ವರುಣಾ ವಿಧಾನಸಭಾ ಕ್ಷೇತ್ರದ ಬೀರೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, 1978ರಿಂದ ತಮ್ಮ ರಾಜಕೀಯ ಜೀವನ ಆರಂಭವಾಗಿದ್ದು, ಅಂದಿನಿಂದ ಇಲ್ಲಿಯವರೆಗೆ ಜನರ ಅಪಾರ ಬೆಂಬಲ ದೊರೆತಿದೆ ಎಂದು ಸ್ಮರಿಸಿದರು. ಜನರ ಬೆಂಬಲದಿಂದ ಈ ಮಟ್ಟಕ್ಕೆ ಬೆಳೆದಿದ್ದೇನೆ  ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರ ನಿರಂತರ…

Read More
T20 World Cup cm Siddaramaiah and others wishes to team india for win

T20 World Cup: ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಶುಭಾಶಯ ಕೋರಿದ ನಾಡಿನ ಗಣ್ಯರು

ಬೆಂಗಳೂರು: ಐಸಿಸಿ ಟಿ-20 ಕ್ರಿಕೆಟ್‌ನಲ್ಲಿ ಭಾರತ ಮೂರನೇ ಬಾರಿ ವಿಶ್ವಕಪ್ (T20 World Cup) ಗಳಿಸಿರುವುದಕ್ಕೆ ನಾಡಿನ ಗಣ್ಯರು ಹರ್ಷ ವ್ಯಕ್ತಪಡಿಸಿದ್ದು, ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ. ವಿಧಾನಸಭೆಯಲ್ಲಿ ತಂಡಕ್ಕೆ (T20 World Cup) ಅಭಿನಂದನೆ ವಿಧಾನಸಭಾ ಸದನವು ಇಂದು ಟಿ-20 ವಿಶ್ವಕಪ್‌ನಲ್ಲಿ ಭಾರತ ತಂಡದ ಅಭೂತಪೂರ್ವ ಗೆಲುವಿಗೆ ಅಧಿಕೃತವಾಗಿ ಅಭಿನಂದನೆ ಸಲ್ಲಿಸಿತು.  ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಿದ ಸಭಾಧ್ಯಕ್ಷ ಯು.ಟಿ. ಖಾದರ್ ಅವರು, ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಸದನದ ಪರವಾಗಿ…

Read More
R Ashok slams cm Siddaramaiah over budget

R Ashok: ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕೆ ಆರ್‌ ಅಶೋಕ್‌ ಆಗ್ರಹ

ಬೆಂಗಳೂರು: ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.‌ ಅಶೋಕ (R Ashok) ಒತ್ತಾಯ ಮಾಡಿದ್ದಾರೆ. ಪ್ರಾದೇಶಿಕ ಅಸಮತೋಲನಕ್ಕೆ ಸಿದ್ದರಾಮಯ್ಯ ಕಾರಣ  ಅತಿ ಹೆಚ್ಚು ಬಜೆಟ್‌ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು…

Read More