R Ashok: ರಾಜ್ಯದ ಪೊಲೀಸ್ ಠಾಣೆಗಳು ‘ಕಾಂಗ್ರೆಸ್ ಕಚೇರಿ’ಗಳಾಗಿವೆ: ರಾಜ್ಯಪಾಲರ ಭೇಟಿ ಬಳಿಕ ಆರ್. ಅಶೋಕ್ ತೀವ್ರ ಆಕ್ರೋಶ!
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಕರ್ನಾಟಕದ ಪೊಲೀಸ್ ಠಾಣೆಗಳೆಲ್ಲವೂ ‘ಕಾಂಗ್ರೆಸ್ ಕಚೇರಿ’ಗಳಂತೆ ಬದಲಾಗಿವೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R Ashok) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರವು ಪ್ರತಿಪಕ್ಷಗಳ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ, ಬಿಜೆಪಿ ಮತ್ತು ಜೆಡಿಎಸ್ನ ನಿಯೋಗವು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು ವಿರೋಧ ಪಕ್ಷದ ನಾಯಕ…
