DK Shivakumar: ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ: ಡಿಕೆ ಶಿವಕುಮಾರ್
ಬೆಂಗಳೂರು: ಈ ದೇಶದ ಸಂವಿಧಾನವನ್ನು ಉಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವಂತೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದುಗೆ ಮಾತನಾಡಿದ ಅವರು ಸಂವಿಧಾನ ಪೀಠಿಕೆ ಓದು ಅಭಿಯಾನದ ಮೂಲಕ ಹೊಸ ಪೀಳಿಗೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಸಂವಿಧಾನದ ರಕ್ಷಣೆಗೆ ನಮ್ಮ ಸರ್ಕಾರ ಪ್ರತಿ ಹಂತದಲ್ಲೂ…
