Suresh Kumar: ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು: ರಾಜಕೀಯ ದುರುದ್ದೇಶದ ಸುಳ್ಳು ಆರೋಪ ಎಂದು ಬಿಜೆಪಿ ಹಿರಿಯ ನಾಯಕ ಕಿಡಿ!
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಹಿರಿಯ ಬಿಜೆಪಿ ಮುಖಂಡ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ (Suresh Kumar) ಅವರ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ಭ್ರಷ್ಟಾಚಾರ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿರುವ ಕುರಿತು ಗಂಭೀರ ದೂರು ಸಲ್ಲಿಕೆಯಾಗಿದೆ. ಈ ಬೆಳವಣಿಗೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸುರೇಶ್ ಕುಮಾರ್, ತಮ್ಮ ಮೇಲಿನ ಆರೋಪಗಳು ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ರಾಜಕೀಯವಾಗಿ ಮಸಿ ಬಳಿಯುವ ಪ್ರಯತ್ನ ಎಂದು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಲೋಕಾಯುಕ್ತ ಕಚೇರಿಯಿಂದ ತಮಗೆ ನೋಟಿಸ್ ಬರುವ ಮುನ್ನವೇ, ಮುಂದಿನ…
