Crime: ಕೇತನ್ ಅಗರ್ವಾಲ್ ಹತ್ಯೆ ಕೇಸ್: ಆರೋಪಿ ಸಿಯಾ ಗೋಯಲ್‌ಗೆ ಸುಳ್ಳು ಪತ್ತೆ ಪರೀಕ್ಷೆ
ಪುಣೆ: ಮಹಾರಾಷ್ಟ್ರದಲ್ಲಿ ಭಾರಿ ಸಂಚಲನ ಮೂಡಿಸಿರುವ ಪುಣೆಯ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ಕೊಲೆ ಪ್ರಕರಣದ ಮುಖ್ಯ ಆರೋಪಿಯಾಗಿರುವ, ಮೃತನ ಭಾವಿ ಪತ್ನಿ ಸಿಯಾ ಗೋಯಲ್‌ಗೆ (Crime) ಪಾಲಿಗ್ರಾಫ್ (ಸುಳ್ಳು ಪತ್ತೆ) ಪರೀಕ್ಷೆ ನಡೆಸಲು ಅನುಮತಿ ಕೋರಿ ಪುಣೆ ಪೊಲೀಸರು ಗುರುವಾರ (ಜುಲೈ 2) ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಪ್ರತ್ಯಕ್ಷದರ್ಶಿಗಳು ಅಥವಾ ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದು ಯಾರು ಎಂಬುದಕ್ಕೆ ನಿಖರವಾದ ಸಾಕ್ಷ್ಯಾಧಾರಗಳು ಸಿಗದೇ…
