Crime: ನಟಿ ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಕ್ ಆತ್ಮಹತ್ಯೆ ಪ್ರಕರಣ: ಸಾವಿನ ನಿಖರ ಕಾರಣ ಕೋರಿ ಪತ್ನಿಯಿಂದ ಪೊಲೀಸ್ ದೂರು!
ಬೆಂಗಳೂರು: ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿರುವ (RR Nagar) ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ ಅವರ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ ನೇಣಿಗೆ ಶರಣಾಗಿರುವ (Crime) ಘಟನೆ ಹೊಸ ತಿರುವು ಪಡೆದುಕೊಂಡಿದೆ. ಪತ್ನಿ ಹಾಗೂ ಮಗನಿದ್ದರೂ ವೈಶಾಕ್ ನಟಿಯ ಫ್ಲಾಟ್‌ನಲ್ಲಿ ಏಕೆ ಉಳಿದುಕೊಂಡಿದ್ದರು ಎಂಬ ಅನುಮಾನಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮೃತರ ಪತ್ನಿ ಮೇಘಾ ಅವರು ಪೊಲೀಸರಿಗೆ ಅಧಿಕೃತ ದೂರು ನೀಡಿದ್ದಾರೆ. ನಟಿಗೆ ತಾವು ಸಾಯುತ್ತಿರುವುದಾಗಿ ಕೊನೆಯ ಸಂದೇಶ ರವಾನಿಸಿದ ಬಳಿಕ ಉದ್ಯಮಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ….
