TOP NEWS
Panic in Bengaluru Kaggadasapura as Four LPG Cylinder blast School Window Damaged

Cylinder Blast: ಸರಣಿಯಾಗಿ ಸ್ಫೋಟಗೊಂಡ ನಾಲ್ಕು ಎಲ್‌ಪಿಜಿ ಸಿಲಿಂಡರ್‌ಗಳು: ಆತಂಕ ಸೃಷ್ಟಿಸಿದ ಅಕ್ರಮ ದಂಧೆ

ಬೆಂಗಳೂರು: ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಗ್ಗದಾಸಪುರದಲ್ಲಿ ಭಾರಿ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ. ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು (Cylinder Blast) ರೀಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಸರಣಿಯಾಗಿ ನಾಲ್ಕು ಎಲ್‌ಪಿಜಿ ಸಿಲಿಂಡರ್‌ಗಳು ಭೀಕರವಾಗಿ ಸ್ಫೋಟಗೊಂಡಿವೆ. ಕಗ್ಗದಾಸಪುರದ ಅಟಲ್ ಬಿಹಾರಿ ವಾಜಪೇಯಿ ಪಾರ್ಕ್ ಸಮೀಪ ಈ ಘಟನೆ ಸಂಭವಿಸಿದ್ದು, ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಒಂದು ಗ್ಯಾಸ್ ಸಿಲಿಂಡರ್ ಹಾರಿ ಪಕ್ಕದಲ್ಲೇ ಇದ್ದ ಶಾಲೆಯ ಕಿಟಕಿಗೆ ಬಲವಾಗಿ ಅಪ್ಪಳಿಸಿದೆ. ಏಕಾಏಕಿ ಸಾಲು ಸಾಲು ಸ್ಫೋಟದ ಶಬ್ದ ಕೇಳಿಬರುತ್ತಿದ್ದಂತೆ ಸುತ್ತಮುತ್ತಲಿನ ನಿವಾಸಿಗಳು ಭೀತಿಯಿಂದ…

Read More