Mysuru Dasara: ಮೈಸೂರು ದಸರಾಗೆ ಕರಾವಳಿ ಕಂಬಳದ ರಂಗು: ಅಕ್ಟೋಬರ್ 18ರಿಂದ ಅಹೋರಾತ್ರಿ ಜಾನಪದ ಕ್ರೀಡಾ ವೈಭವ!
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯಲಿರುವ ವಿಶ್ವವಿಖ್ಯಾತ ದಸರಾ (Mysuru Dasara) ಮಹೋತ್ಸವಕ್ಕೆ ಈ ಬಾರಿ ಹೊಸ ಮೆರಗು ಹಾಗೂ ವಿಶೇಷ ಆಕರ್ಷಣೆ ತರಲು ರಾಜ್ಯ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಕರಾವಳಿ ಭಾಗದ ಅತ್ಯಂತ ಜನಪ್ರಿಯ ಹಾಗೂ ಸಾಂಪ್ರದಾಯಿಕ ಕ್ರೀಡೆಯಾದ ‘ಕಂಬಳ’ವನ್ನು ಈ ಬಾರಿಯ ದಸರಾದಲ್ಲಿ ಅದ್ಧೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಕ್ಟೋಬರ್ 18 ರಂದು ಕ್ರೀಡಾಕೂಟ ಆಯೋಜನೆ…
