Delimitation: ಕ್ಷೇತ್ರ ಮರುವಿಂಗಡಣೆ ಬಿಲ್ ಪಾಸ್ ಮಾಡಲು ಎನ್‌ಡಿಎಗೆ ಇದೆ ಸಂಖ್ಯಾಬಲ: ಪಿಎಂ ಮೋದಿ!
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಮಹಿಳಾ ಮೀಸಲಾತಿ ಮಸೂದೆ ಹಾಗೂ ಕ್ಷೇತ್ರ ಮರುವಿಂಗಡಣೆ (Delimitation) ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲು ಎನ್‌ಡಿಎ ಮೈತ್ರಿಕೂಟಕ್ಕೆ ಅಗತ್ಯವಿರುವ ಪೂರ್ಣ ಬೆಂಬಲವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ಗದ್ದಲದಿಂದಾಗಿ ಸದ್ಯ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಈ ಮಸೂದೆಗಳನ್ನು ಮಂಡಿಸಲು ಸಾಧ್ಯವಾಗದಿದ್ದರೆ, ಇದೇ ತಿಂಗಳು ಸಂಸತ್ತಿನ ವಿಶೇಷ ಅಧಿವೇಶನ ಕರೆದಾದರೂ ಇವುಗಳನ್ನು ಪಾಸ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಪ್ರಮುಖ ಬಿಲ್‌ಗಳನ್ನು ಕಾನೂನನ್ನಾಗಿ ಮಾಡಲು ಈಗಾಗಲೇ ಎನ್‌ಡಿಎ ಸರ್ಕಾರಕ್ಕೆ…
