dk suresh cryptic statement about cm change row

DK Suresh: ಕಾಲ ಕೂಡಿ ಬರಲಿ ಎಂದು ಕಾಯುತ್ತಿದ್ದೇವೆ: ನಾಯಕತ್ವ ಬದಲಾವಣೆ ಕುರಿತು ಡಿ.ಕೆ. ಸುರೇಶ್ ಮಾರ್ಮಿಕ ಮಾತು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ 64ನೇ ಜನ್ಮದಿನದ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ‘ಅಧಿಕಾರ ಹಂಚಿಕೆ’ಯ ಚರ್ಚೆ ಮುನ್ನೆಲೆಗೆ ಬಂದಿದೆ. ಈ ವಿಶೇಷ ದಿನದಂದು ಹೈಕಮಾಂಡ್‌ನಿಂದ ಶುಭ ಸುದ್ದಿ ಸಿಗಲಿದೆಯೇ ಎಂಬ ಪ್ರಶ್ನೆಗೆ ಶಿವಕುಮಾರ್ ಅವರ ಸಹೋದರ, ಮಾಜಿ ಸಂಸದ ಡಿ.ಕೆ. ಸುರೇಶ್ (DK Suresh) ಅವರು ಕುತೂಹಲಕಾರಿ ಪ್ರತಿಕ್ರಿಯೆ ನೀಡಿದ್ದಾರೆ. 64ನೇ ವಸಂತಕ್ಕೆ ಕಾಲಿಡುವುದೇ ಶುಭ ಸುದ್ದಿ: ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, “ಶಿವಕುಮಾರ್ ಅವರಿಗೆ 63 ವರ್ಷ ಮುಗಿದು 64ನೇ ವರ್ಷಕ್ಕೆ ಕಾಲಿಡುತ್ತಿರುವುದೇ…

Read More
DN Jeevaraj reaction about dk shivakumar statement

DN Jeevaraj: ಶೃಂಗೇರಿ ಮರುಮತ ಏಣಿಕೆ, ಡಿಕೆಶಿಗೆ ಜೀವರಾಜ್‌ ಟಾಂಗ್

ಬೆಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಮರು ಎಣಿಕೆಯಲ್ಲಿ ಜಯ ಸಾಧಿಸಿರುವ ಬಿಜೆಪಿ ಶಾಸಕ ಡಿ.ಎನ್. ಜೀವರಾಜ್ (DN Jeevaraj) ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳಿಗೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಉಭಯ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ. ಬೆದರಿಕೆ ತಂತ್ರ ನಡೆಯಲ್ಲ: ಡಿಕೆಶಿಗೆ ಜೀವರಾಜ್ ಟಾಂಗ್ ಮರು ಎಣಿಕೆಯಲ್ಲಿ ಗೆಲುವು ದಾಖಲಿಸಿದ ನಂತರ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ…

Read More
DK Shivakumar about by election result

DK Shivakumar: ಗ್ಯಾರಂಟಿ ಯೋಜನೆಗಳೇ ನಮ್ಮ ಗೆಲುವಿನ ಶ್ರೀರಕ್ಷೆ: ಡಿಕೆಶಿ

ಬೆಂಗಳೂರು: ಕರ್ನಾಟಕದ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಸಾಧಿಸಿರುವ ಯಶಸ್ಸಿಗೆ ರಾಜ್ಯ ಸರ್ಕಾರದ ಜನಕಲ್ಯಾಣ ಯೋಜನೆಗಳೇ ಮೂಲಕಾರಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ವಿಶ್ಲೇಷಿಸಿದ್ದಾರೆ. ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಕೇರಳದಲ್ಲಿ ಆಡಳಿತ ವಿರೋಧಿ ಅಲೆಯ ನಡುವೆ ಯುಡಿಎಫ್‌ ಮೈತ್ರಿಕೂಟ ಸಾಧಿಸಿರುವ ವಿಜಯವು ನಿರೀಕ್ಷಿತವಾಗಿತ್ತು ಎಂದು ಅಭಿಪ್ರಾಯಪಟ್ಟರು. ದಾವಣಗೆರೆ ದಕ್ಷಿಣದ ಫಲಿತಾಂಶದ ವಿಶ್ಲೇಷಣೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಗೆಲುವಿನ ಬಗ್ಗೆ ಮಾತನಾಡಿದ ಡಿಸಿಎಂ, “ಕ್ಷೇತ್ರದಲ್ಲಿ ಹಲವು ಗೊಂದಲಗಳಿದ್ದರೂ ಕಾಂಗ್ರೆಸ್‌ ಅಭ್ಯರ್ಥಿ ಸುಲಭವಾಗಿ ಗೆಲ್ಲುತ್ತಾರೆ ಎಂಬ…

Read More
Dk shivakumar talks about by election result

DK Shivakumar: ತಮಿಳುನಾಡು ಫಲಿತಾಂಶ ಅಚ್ಚರಿ ತಂದಿದೆ, ಅಲ್ಲಿ ಹೊಸ ಯುಗಾರಂಭ: ಡಿ.ಕೆ. ಶಿವಕುಮಾರ್

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಹಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ತಮಿಳುನಾಡು ಚುನಾವಣಾ ಫಲಿತಾಂಶವು ತಮಗೆ ಅಚ್ಚರಿ ಮೂಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ತಮಿಳುನಾಡಿನಲ್ಲಿ (DK Shivakumar) ಹೊಸ ಯುಗಾರಂಭ “ತಮಿಳುನಾಡು ಫಲಿತಾಂಶವನ್ನು ಗ್ರಹಿಸಲು ಸಾಧ್ಯವಾಗಲಿಲ್ಲ. ಅಲ್ಲಿ 30-40% ರಷ್ಟು ಮತಗಳು ಬೇರೆಡೆ ಹೋಗಬಹುದು ಎಂದು ನಿರೀಕ್ಷಿಸಿದ್ದೆವು. ಆದರೆ ಈ ಪ್ರಮಾಣದಲ್ಲಿ ಬದಲಾವಣೆ ಉಂಟಾಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಅಲ್ಲಿ ನಿಜಕ್ಕೂ ಒಂದು ಹೊಸ ಯುಗ…

Read More
by vijayendra prediction over cm change row

BY Vijayendra: ಸಿಎಂ ಬದಲಾವಣೆ ವಿಚಾರ: ಬಿ.ವೈ. ವಿಜಯೇಂದ್ರ ಭವಿಷ್ಯವಾಣಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಚರ್ಚೆಗಳು ಮತ್ತೆ ತೀವ್ರಗೊಂಡಿವೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಭವಿಷ್ಯ ನುಡಿದಿದ್ದರೆ, ಅತ್ತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂಬ ಸಂದೇಶ ರವಾನಿಸಿದ್ದಾರೆ. ದಿನಾಂಕವೊಂದೇ ಬಾಕಿ ಎಂದ ವಿಜಯೇಂದ್ರ: ಮೈಸೂರಿನಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುವ ಸಮಯ ಹತ್ತಿರ ಬಂದಿದೆ, ಕೇವಲ ದಿನಾಂಕ ನಿಗದಿಯಾಗುವುದಷ್ಟೇ ಬಾಕಿ ಇದೆ,” ಎಂದು ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ನಿರಂತರ ಕಿತ್ತಾಟ…

Read More
dk shivakumar political statement increased curiosity

DK Shivakumar: ಹೈಕಮಾಂಡ್ ತೀರ್ಮಾನವೇ ನಮಗೆ ಪ್ರಸಾದ: ನಾಯಕತ್ವ ಬದಲಾವಣೆ ಚರ್ಚೆಗೆ ಡಿಕೆಶಿ ಮಾರ್ಮಿಕ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಸಂಚಲನ ಮತ್ತೆ ಶುರುವಾಗಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಏನೇ ಆದೇಶ ನೀಡಿದರೂ ನಮಗದು ಪ್ರಸಾದ ಇದ್ದಂತೆ,” ಎಂದು ಹೇಳುವ ಮೂಲಕ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

Read More
remove road side shops which is near to compounds says dk shivakumar

DK Shivakumar: ಕಾಂಪೌಂಡ್ ಪಕ್ಕ ಇರುವ ಬೀದಿ ವ್ಯಾಪಾರಿಗಳ ತೆರವಿಗೆ ಸೂಚನೆ

ಬೆಂಗಳೂರು: ಇಡೀ ಬೆಂಗಳೂರಿನಾದ್ಯಂತ ಅಪಾಯಕಾರಿಯಾಗಿರುವ ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಎಂದು ಸೂಚನೆ ನೀಡಲಾಗಿದೆ. ಇಂತಹ ಪ್ರದೇಶಗಳನ್ನು ಗುರುತಿಸಿ ಎಂದು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಹೇಳಿದರು. ಈ ಘಟನೆ ಆಗಬಾರದಿತ್ತು ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿದೆಯೇ ಎಂದು ಕೇಳಿದಾಗ, “ಈ ದುರ್ಘಟನೆ ಸಂಭವಿಸಬಾರದಿತ್ತು, ಆದರೂ ಸಂಭವಿಸಿದೆ ಯಾವ ಅಧಿಕಾರಿಗಳ ನಿರ್ಲಕ್ಷ್ಯ ಎಂದು…

Read More