West Asia War: ಮಧ್ಯಪ್ರಾಚ್ಯ ರಾಷ್ಟ್ರ ಬಿಕ್ಕಟ್ಟು, ಭಾರತದಿಂದ ಅಗತ್ಯ ಕ್ರಮ: ರಾಮಮೋಹನ್ ನಾಯ್ಡು
ನವದೆಹಲಿ: ಮಧ್ಯಪ್ರಾಚ್ಯ ರಾಷ್ಟ್ರಗಳ (West Asia War) ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಾಗರಿಕ ವಿಮಾನಯಾನ ಕಾರ್ಯಾಚರಣೆಗಳ ಸುರಕ್ಷತೆ ಖಚಿತಪಡಿಸಿಕೊಳ್ಳಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ರಾಜ್ಯಸಭೆಗಿಂದು ತಿಳಿಸಿದ್ದಾರೆ. ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು, ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ವಿಮಾನಯಾನ ಸಂಸ್ಥೆಗಳೊಂದಿಗೆ ತಕ್ಷಣ ಸಂಪರ್ಕ ಸಾಧಿಸಲಾಗಿದೆ. ಶೇಕಡ 100 ರಷ್ಟು …
