Crime: ದೆಹಲಿ-ಬೆಂಗಳೂರು ಅಂತರರಾಜ್ಯ ಡ್ರಗ್ಸ್ ಜಾಲದ 8 ಪೆಡ್ಲರ್‌ಗಳ ಬಂಧನ, 34 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ
ಬೆಂಗಳೂರು: ರಾಜಧಾನಿಯ ಹೆಬ್ಬಾಳ ಠಾಣೆಯ (Crime) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಸಾಗಿಸಿ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು 34 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಅತ್ಯಂತ ವ್ಯವಸ್ಥಿತವಾಗಿ ಮೂರು ಹಂತಗಳಲ್ಲಿ (ಲೇಯರ್ಸ್) ಕಾರ್ಯನಿರ್ವಹಿಸುತ್ತಿದ್ದ ಈ ಗ್ಯಾಂಗ್, ಡ್ರಗ್ಸ್ ಸಾಗಾಟಕ್ಕೆ ಕಲ್ಪನಾತೀತ ದಾರಿಗಳನ್ನು ಕಂಡುಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗಿಫ್ಟ್ ಬಾಕ್ಸ್,…
