KPSC: ಪ್ರಶ್ನೆಪತ್ರಿಕೆಗೆ 70 ಲಕ್ಷ ರೂ. ಲಂಚ: ಕೆಪಿಎಸ್ಸಿ ಬೃಹತ್ ಅಕ್ರಮದ ಬಣ್ಣ ಬಯಲು ಮಾಡಿದ ಇಡಿ!
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಜಾರಿ ನಿರ್ದೇಶನಾಲಯ (ಇಡಿ) ತನ್ನ ತನಿಖಾ ಜಾಲವನ್ನು ಮತ್ತಷ್ಟು ಬಿಗಿಗೊಳಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಹಾಗೂ ಸದಸ್ಯೆ ಗೀತಾ ಅವರನ್ನು ಇಡಿ ಅಧಿಕಾರಿಗಳು ಸಿಸಿಎಚ್ 4ನೇ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಕ್ರಮದ ಜಾಡು ಹಿಡಿಯಲು ಇಬ್ಬರನ್ನೂ 14 ದಿನಗಳ ಕಾಲ ತನಿಖಾಧಿಕಾರಿಗಳ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಪ್ರಶ್ನೆಪತ್ರಿಕೆಗೆ ₹30 ಲಕ್ಷದಿಂದ ₹70…
