Madhu Bangarappa: ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ದರ ಶೀಘ್ರವೇ ಹೆಚ್ಚಳ: ಸಚಿವ ಮಧು ಬಂಗಾರಪ್ಪ ಭರವಸೆ!
ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರದ ರೂಪದಲ್ಲಿ ನೀಡಲಾಗುತ್ತಿರುವ ಮೊಟ್ಟೆಯ ದರವನ್ನು ಹೆಚ್ಚಿಸುವ ಕುರಿತು ಶೀಘ್ರದಲ್ಲೇ ಹಣಕಾಸು ಇಲಾಖೆಯೊಂದಿಗೆ ಮಾತುಕತೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಭರವಸೆ ನೀಡಿದ್ದಾರೆ. ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿಗೌಡ ಅವರು ಎತ್ತಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಶಾಲಾ ಮಕ್ಕಳ ಪೋಷಕಾಂಶಗಳ ಮಟ್ಟವನ್ನು ಕಾಯ್ದುಕೊಳ್ಳಲು ಸರ್ಕಾರ ಬದ್ಧವಾಗಿದ್ದು, ಪ್ರಸ್ತುತ…
