Meta: ಪಿಎಂ ಮೋದಿ ಪೋಸ್ಟ್ ಡಿಲೀಟ್ ಹಿನ್ನೆಲೆ: ಮೆಟಾ ಸಂಸ್ಥೆಗೆ ಕೇಂದ್ರ ಸರ್ಕಾರ ತುರ್ತು ಸಮನ್ಸ್!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವ ಸಮೂಹವನ್ನು ಉದ್ದೇಶಿಸಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋ ಪೋಸ್ಟ್ ಒಂದನ್ನು ಮೆಟಾ ಸಂಸ್ಥೆಯು (Meta) ದಿಢೀರನೆ ಡಿಲೀಟ್ ಮಾಡಿದ್ದು, ಇದೀಗ ಕೇಂದ್ರ ಸರ್ಕಾರ ಮತ್ತು ಸಾಮಾಜಿಕ ಜಾಲತಾಣ ದೈತ್ಯನ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿದೆ. ಈ ಗಂಭೀರ ಲೋಪವನ್ನು ತೀವ್ರವಾಗಿ ಪರಿಗಣಿಸಿರುವ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY), ಮೆಟಾ ಸಂಸ್ಥೆಯ ಜಾಗತಿಕ ಸಾರ್ವಜನಿಕ ನೀತಿ ವಿಭಾಗದ ಮುಖ್ಯಸ್ಥರಿಗೆ ತುರ್ತು ಸಮನ್ಸ್ ಜಾರಿ ಮಾಡಿದೆ ಎಂದು…
