DK Shivakumar: ಅಕ್ರಮ ಬಂದೂಕು ಶರಣತಿಗೆ ನವೆಂಬರ್ 1 ಕಡೇ ದಿನ: ತಪ್ಪಿದರೆ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ
ಬೆಂಗಳೂರು: “ನವೆಂಬರ್ 1ನೇ ತಾರೀಕಿನೊಳಗೆ ಪರವಾನಗಿ ಇಲ್ಲದ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಅಕ್ರಮ ಶಸ್ತ್ರಾಸ್ತ್ರಗಳನ್ನು ತಾವಾಗಿಯೇ ಒಪ್ಪಿಸಿದರೆ ಯಾವುದೇ ಪ್ರಕರಣ ದಾಖಲಿಸುವುದಿಲ್ಲ. ಹೆಚ್ಚಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಪರವಾನಗಿ ಇಲ್ಲದೇ ಇರುವ ಬಂದೂಕುಗಳಿಂದಲೇ ಜೀವ ಕಳೆದುಕೊಂಡಿದ್ದಾರೆ. ನೀವು ನಿಮ್ಮ…
