TOP NEWS
No Govt Interference in SIT Process Dr G Parameshwara

SIR: ಎಸ್‌ಐಆರ್‌ನಲ್ಲಿ ಸರ್ಕಾರದ ಕೈವಾಡವಿಲ್ಲ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ!

ತುಮಕೂರು: ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಸಂಪೂರ್ಣವಾಗಿ ಭಾರತೀಯ ಚುನಾವಣಾ ಆಯೋಗದ (ECI) ನಿಯಮಾವಳಿಗಳ ಪ್ರಕಾರವೇ ನಡೆಯುತ್ತಿದ್ದು, ಇದರಲ್ಲಿ ಸರ್ಕಾರದ ಯಾವುದೇ ರೀತಿಯ ಹಸ್ತಕ್ಷೇಪವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಗೊಂದಲ, ಬಿಎಲ್‌ಒಗಳ ಕರ್ತವ್ಯ ಲೋಪ ಹಾಗೂ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿವಾದದ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು. ವಿರೋಧ ಪಕ್ಷದ ಆರೋಪಕ್ಕೆ ತಿರುಗೇಟು ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು,…

Read More
DCM G Parameshwar strict orders to officers regarding work

G Parameshwar: ವಿಧಾನಸೌಧದಲ್ಲಿ ಪ್ರತ್ಯಕ್ಷರಾದ ಜಿ. ಪರಮೇಶ್ವರ್; ಕಂದಾಯ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಬೆಂಗಳೂರು: ಇತ್ತೀಚೆಗೆ ತೀವ್ರ ವೈರಲ್ ಸೋಂಕಿನಿಂದಾಗಿ ಅನಾರೋಗ್ಯಕ್ಕೆ ಒಳಗಾಗಿದ್ದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G Parameshwar) ಅವರು ವೈದ್ಯರ ನಿರ್ದೇಶನದಂತೆ ಸಂಪೂರ್ಣ ವಿಶ್ರಾಂತಿಯಲ್ಲಿದ್ದರು. ಅನಾರೋಗ್ಯದ ನಡುವೆಯೂ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ಪಾಲ್ಗೊಂಡು ಮತದಾನ ಮಾಡಿದ್ದರು. ಇದೀಗ ಸುಮಾರು ಒಂದು ವಾರದ ಬಿಡುವಿನ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಇಲಾಖೆಯ ಕರ್ತವ್ಯದ ನಿಮಿತ್ತ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಅವರು ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಸುಧಾರಣೆಗೆ ಸಂಬಂಧಿಸಿದಂತೆ ಹಲವು…

Read More
G parameshwar emotional about missing cm post many times

G Parameshwar: ಸಿಎಂ ಸ್ಥಾನ ಕೈತಪ್ಪಿದ ನೋವು ಕೊನೆಗೂ ಬಹಿರಂಗ: ಭಾವುಕರಾಗಿ ಕಣ್ಣೀರಿಟ್ಟ ಡಿಸಿಎಂ ಡಾ. ಜಿ. ಪರಮೇಶ್ವರ್!

ತುಮಕೂರು: ಕರ್ನಾಟಕ ಕಾಂಗ್ರೆಸ್‌ನ ಅತ್ಯಂತ ಹಿರಿಯ ಹಾಗೂ ನಿಷ್ಠಾವಂತ ದಲಿತ ನಾಯಕ, ಪ್ರಸ್ತುತ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ (G Parameshwar) ಅವರ ಮನಸ್ಸಿನಲ್ಲಿದ್ದ ಸಿಎಂ ಹುದ್ದೆಯ ನಿರಾಸೆಯ ನೋವು ಕೊನೆಗೂ ಸಾರ್ವಜನಿಕವಾಗಿ ಸ್ಫೋಟಗೊಂಡಿದೆ. ಸತತ ಪ್ರಯತ್ನಗಳ ನಡುವೆಯೂ ತಮಗೆ ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ಸಿಗದೇ ಹೋದದ್ದಕ್ಕೆ ತೀವ್ರ ಬೇಸರ ಹೊರಹಾಕಿರುವ ಅವರು, ತಮ್ಮ ಆಪ್ತರು ಹಾಗೂ ಸಿದ್ದಾರ್ಥ ಕಾಲೇಜಿನ ಸಿಬ್ಬಂದಿ ಎದುರು ಮನಬಿಚ್ಚಿ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ಅಲ್ಲದೆ, ಸಿಎಂ ಸ್ಥಾನ ಸಿಗದಿದ್ದರೆ ರಾಜಕೀಯ…

Read More
Congress these two leaders will become dcm in dk shivakumar cabinet

Congress: ಕರ್ನಾಟಕದಲ್ಲಿ ಇಬ್ಬರಿಗಷ್ಟೇ ಡಿಸಿಎಂ ಪಟ್ಟ? ಸಚಿವ ಸ್ಥಾನಕ್ಕಾಗಿ ಯತೀಂದ್ರ ಸಿದ್ದರಾಮಯ್ಯ ಭಾರಿ ಬೇಡಿಕೆ!

ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಚಿವ ಸಂಪುಟದ ಲೆಕ್ಕಾಚಾರಗಳು ಹೊಸ ತಿರುವು ಪಡೆದುಕೊಂಡಿವೆ. ಈ ಮೊದಲು ಐವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬ ಭಾರಿ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದವು. ಆದರೆ ಈಗ ಹೈಕಮಾಂಡ್ ಆ ವದಂತಿಗಳಿಗೆ ಬ್ರೇಕ್ ಹಾಕಿದ್ದು, ಕೇವಲ ಇಬ್ಬರು ಹಿರಿಯ ನಾಯಕರಿಗೆ ಮಾತ್ರ ಡಿಸಿಎಂ ಪಟ್ಟ ಕಟ್ಟಲು ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಇಬ್ಬರಿಗೆ ಡಿಸಿಎಂ ಪಟ್ಟ? ಪಕ್ಷದ ಅತ್ಯಂತ ಹಿರಿಯ…

Read More
g parameshwar statement on ramachandra rao suspension revoke

G Parameshwar: ಡಿಜಿಪಿ ಅಮಾನತು ಹಿಂಪಡೆತ ಹಾಗೂ ಐಪಿಎಲ್ ವಿವಾದ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಎರಡು ಪ್ರಮುಖ ವಿಚಾರಗಳ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಅವರು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಡಿಜಿಪಿ ರಾಮಚಂದ್ರರಾವ್ ಅವರ ಅಮಾನತು ಆದೇಶ ವಾಪಸ್ ಹಾಗೂ ಐಪಿಎಲ್ ಪಂದ್ಯಗಳು ಬೆಂಗಳೂರಿನಿಂದ ಕೈತಪ್ಪಿರುವ ಬಗ್ಗೆ ಅವರು ಸುದೀರ್ಘವಾಗಿ ಮಾತನಾಡಿದ್ದಾರೆ. ನಿವೃತ್ತಿ ಹಿನ್ನೆಲೆ ಡಿಜಿಪಿ ಅಮಾನತು ವಾಪಸ್: ಡಿಜಿಪಿ ರಾಮಚಂದ್ರರಾವ್ ಅವರು ಇದೇ ತಿಂಗಳ ಕೊನೆಯಲ್ಲಿ ನಿವೃತ್ತರಾಗುತ್ತಿರುವುದರಿಂದ, ಅವರ ಅಮಾನತನ್ನು ಮುಖ್ಯಮಂತ್ರಿಗಳ ಒಪ್ಪಿಗೆಯೊಂದಿಗೆ ರದ್ದುಗೊಳಿಸಲಾಗಿದೆ. “ನಿವೃತ್ತಿಯ ನಂತರ ಪಿಂಚಣಿ…

Read More
g parameshwar about mamata Banerjee allegation of vote deleting

G Parameshwar: ಬಂಗಾಳದ ಮತದಾನದಲ್ಲಿ ಅಕ್ರಮ ನಡೆದಿದೆಯೇ? ಪರಮೇಶ್ವರ್ ಪ್ರಶ್ನೆ

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರದತ್ತ ಮುನ್ನಡೆಯುತ್ತಿರುವ ಬೆನ್ನಲ್ಲೇ, ಅಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಅನುಮಾನ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂಬ ಮಮತಾ ಬ್ಯಾನರ್ಜಿ ಅವರ ಆರೋಪದ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆಯ ಕಾನೂನುಬದ್ಧತೆಯ ಬಗ್ಗೆ ಸಚಿವರು ಪ್ರಶ್ನೆ ಎತ್ತಿದ್ದಾರೆ. ಕಾನೂನೂ ರೀತಿಯ ತನಿಖೆ ಅಗತ್ಯ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಸಾಧಿಸಲೇಬೇಕು ಎಂಬ ಹಠಕ್ಕೆ ಬಿದ್ದಿರುವುದು…

Read More
Commercial cylinder facing problems not domestic says G Parameshwar

G Parameshwar: ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ: ಜಿ ಪರಮೇಶ್ವರ್‌

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ಅಲ್ಪ ಪ್ರಮಾಣದಲ್ಲಿ ಸಮಸ್ಯೆ ಉಂಟಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ. ಅಕ್ರಮವಾಗಿ ಮಾರಾಟ ಮಾಡಿದ್ರೆ ಕ್ರಮ ತುಮಕೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಅವರು,  ವಾಣಿಜ್ಯ ಸಿಲಿಂಡರ್‌ ಸಮಸ್ಯೆಯಿಂದಾಗಿ ಹೋಟೆಲ್‌ ಉದ್ಯಮದವರಿಗೆ  ಒಂದೆರೆಡು ದಿನ ಸಮಸ್ಯೆ ಆಗಬಹುದು. ಆದರೆ ಇದನ್ನೇ ನೆಪ ಮಾಡಿಕೊಂಡು ಕಾಳಸಂತೆಯಲ್ಲಿ  ವಾಣಿಜ್ಯ ಸಿಲಿಂಡರ್‌ ಮಾರಾಟ ಮಾಡಲು ಮುಂದಾದರೆ ಅಂತಹವರ ವಿರುದ್ಧ…

Read More