G Parameshwar: ಪೊಲೀಸ್ ಇಲಾಖೆ ಖಾಲಿ ಹುದ್ದೆಗಳ ಶೀಘ್ರ ಭರ್ತಿ: ಜಿ ಪರಮೇಶ್ವರ್
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. 900 ಹುದ್ದೆಗೆ ನೇಮಕ ವಿಧಾನಸಭೆಯಲ್ಲಿಂದು ಸದಸ್ಯ ಅರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಳೆ ಒಂದು ವರ್ಷದಲ್ಲಿ 900 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳನ್ನು ನೇಮಕ ಮಾಡಲಾಗಿದೆ. ಹತ್ತು ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ನೇಮಕಕ್ಕೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್ ಠಾಣೆ…
