GBA: ಡಿಸೆಂಬರ್‌ನಲ್ಲಿ ಜಿಬಿಎ ಐದು ಪಾಲಿಕೆಗಳ ಚುನಾವಣೆ: ಸುಪ್ರೀಂ ಆದೇಶದ ಬೆನ್ನಲ್ಲೇ ಆಡಳಿತ ಯಂತ್ರ ಚುರುಕು, ಅಭಿವೃದ್ಧಿ ಕಾಮಗಾರಿಗೆ ವೇಗ!
ಬೆಂಗಳೂರು: ರಾಜಧಾನಿ ಬೆಂಗಳೂರಿನ ಸ್ಥಳೀಯ ಆಡಳಿತ ವ್ಯವಸ್ಥೆಯಲ್ಲಿ ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣಾ ಪ್ರಕ್ರಿಯೆ ಮತ್ತೆ ಮುನ್ನೆಲೆಗೆ ಬಂದಿದೆ. ಸುಪ್ರೀಂ ಕೋರ್ಟ್ ನೀಡಿದ್ದ ಕಟ್ಟುನಿಟ್ಟಿನ ನಿರ್ದೇಶನದಂತೆ ಬರುವ ಡಿಸೆಂಬರ್ ತಿಂಗಳಿನಲ್ಲಿಯೇ ಚುನಾವಣೆ ನಡೆಸುವುದು ಕಡ್ಡಾಯವಾಗಿರುವುದರಿಂದ, ರಾಜ್ಯ ಸರ್ಕಾರ ಹಾಗೂ ಆಡಳಿತ ಯಂತ್ರವು ತೆರೆಮರೆಯಲ್ಲಿ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ಜಿಬಿಎ ವ್ಯಾಪ್ತಿಗೆ ಒಳಪಡುವ ಐದು ನಗರ ಪಾಲಿಕೆಗಳಿಗೆ ೨೦೨೬ರ ಡಿಸೆಂಬರ್ ಅಂತ್ಯದೊಳಗೆ ಪ್ರಕ್ರಿಯೆ ಪೂರ್ಣಗೊಳಿಸಿ ಚುನಾವಣೆ ನಡೆಸುವಂತೆ ಜುಲೈ ೧೭ರಂದು ಸುಪ್ರೀಂ ಕೋರ್ಟ್…
