KPSC: ಸಿಐಡಿ ತನಿಖೆ ಶೇ. 80 ಪೂರ್ಣ, ಎಸ್‌ಐಟಿ ಅನಗತ್ಯ: ಸುಪ್ರೀಂ ಬಾಗಿಲು ತಟ್ಟಿದ ಕಾಂಗ್ರೆಸ್ ಸರ್ಕಾರ
ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದ ತನಿಖೆಗಾಗಿ ಹೈಕೋರ್ಟ್ ಆದೇಶಿಸಿದ್ದ ವಿಶೇಷ ತನಿಖಾ ತಂಡ (SIT) ರಚನೆಯನ್ನು ಪ್ರಶ್ನಿಸಿ ರಾಜ್ಯ ಕಾಂಗ್ರೆಸ್ ಸರ್ಕಾರವು ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಉನ್ನತ ನ್ಯಾಯಾಲಯದ ನಿರ್ದೇಶನದಂತೆ ಕಾರಾಗೃಹ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರ ನೇತೃತ್ವದ ಐವರು ದಕ್ಷ ಅಧಿಕಾರಿಗಳ ತಂಡವು ಮುಂದಿನ ೧೦೦ ದಿನಗಳ ಕಾಲಮಿತಿಯಲ್ಲಿ…
