Supreme Court: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್ – ರಾಹುಲ್ ಗಾಂಧಿ ಪ್ರತಿಭಟನಾ ವೈಖರಿಗೆ ತೀವ್ರ ಅಸಮಾಧಾನ
ನವದೆಹಲಿ: ದೇಶಾದ್ಯಂತ ನಡೆಸಲಾಗಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ಮತ್ತು ವ್ಯತ್ಯಾಸಗಳು ನಡೆದಿವೆ ಎಂದು ಆರೋಪಿಸಿ ಪ್ರತಿಪಕ್ಷಗಳ ‘ಇಂಡಿಯಾ’ (INDIA) ಒಕ್ಕೂಟ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಗುರುವಾರ ಮಹತ್ವದ ಆದೇಶ ನೀಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿಪಕ್ಷ ನಾಯಕ…
