Mysuru: ಭಕ್ತಿಭಾವದಿಂದ ನೆರವೇರಿದ ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ
ಮೈಸೂರು: ಅವಧೂತ ದತ್ತಪೀಠದ ವತಿಯಿಂದ ಮೈಸೂರು (Mysuru) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ ಸಾಮೂಹಿಕ ’ಹನುಮಾನ್ ಚಾಲೀಸಾ ಪಾರಾಯಣ ಮಹಾಯಜ್ಞ’ ನಿನ್ನೆ ಶ್ರದ್ಧೆ, ಭಕ್ತಿಭಾವದಿಂದ ನೆರವೇರಿತು. 50 ಸಾವಿರ ಜನ ಸೇರಿದ್ದ ಕಾರ್ಯಕ್ರಮ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ಕಿಕ್ಕಿರಿದು ಸೇರಿದ್ದ 50 ಸಾವಿರಕ್ಕೂ ಹೆಚ್ಚು ಭಕ್ತರು ಹನುಮನ ಸ್ಮರಣೆ ಮಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪವಮಾನ ಹೋಮ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಚಾಲನೆ ನೀಡಿದರು. ನೆರೆದಿದ್ದ ಜನಸ್ತೋಮವನ್ನು ಉದ್ದೇಶಿಸಿ ದತ್ತ…
