HD Deve Gowda: ದೇಹಕ್ಕೆ ವಯಸ್ಸಾಗಿದೆ, ಬುದ್ಧಿಗಲ್ಲ: ಬಿಡದಿ ಟೌನ್‌ಶಿಪ್ ವಿರುದ್ಧದ ಹೋರಾಟದಲ್ಲಿ ಕಾಂಗ್ರೆಸ್‌ಗೆ ದೇವೇಗೌಡರ ಖಡಕ್ ಟಾಂಗ್!
ಬೆಂಗಳೂರು: ಕರ್ನಾಟಕ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು (HD Deve Gowda) ಭಾಗವಹಿಸಿ ಕಾಂಗ್ರೆಸ್ ಸರ್ಕಾರಕ್ಕೆ ನೇರ ಟಾಂಗ್ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿ ಜತೆ ಮಾತನಾಡಿದ ಅವರು, ಜೆಡಿಎಸ್‌ನ ಈ ಹೋರಾಟವನ್ನು ‘ಪ್ರಾಯಶ್ಚಿತ್ತ ಯಾತ್ರೆ’ ಎಂದು ಕರೆಯುತ್ತಿರುವ ಕಾಂಗ್ರೆಸ್ ನಾಯಕರಿಗೆ ಖಡಕ್ ತಿರುಗೇಟು ನೀಡಿದರು. ರಾಜ್ಯದ ಜನರೇ ಕಾದು ನೋಡಲಿದ್ದಾರೆ ಯಾರಿಗೆ ಪ್ರಾಯಶ್ಚಿತ್ತ ಆಗುತ್ತದೆ ಎಂಬುದನ್ನು ಮುಂದಿನ ದಿನಗಳಲ್ಲಿ ರಾಜ್ಯದ ಜನರೇ…
